ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ | 10% Reservation for Economically Backward Classes in Kannada
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ಸುಪ್ರೀಂಕೋರ್ಟ್ ಇವತ್ತು ತಿಳಿಸಿದೆ ಇದರ ಬಗ್ಗೆ ಈ ಕೆಳಗೆ ವಿವರಿಸಲಾಗಿದೆ.
10% Reservation for Economically Backward Classes in Kannada
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ
ಮುಂದುವರೆದ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕೇಂದ್ರೀಯ ಸಂಸ್ಥೆಗಳು ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸುವ ಸಂವಿಧಾನದ 103ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಸಾಮಾನ್ಯ ವರ್ಗಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವ ಸಂವಿಧಾನದ 103ನೇ ತಿದ್ದುಪಡಿ ಮಾನ್ಯತೆಯನ್ನು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಮೂರನೇ ಎರಡರಷ್ಟು ಬಹುಮತದೊಂದಿಗೆ ಎತ್ತಿ ಹಿಡಿದಿದೆ.
ನಾಲ್ವರು ನ್ಯಾಯಾಧೀಶರು ಈ ಕಾಯ್ದೆ ಪರವಾಗಿ ವಾದಿಸಿದರೆ, ಮತ್ತೋರ್ವರು ವಿರುದ್ಧವಾಗಿ ವಾದಿಸಿದ್ದಾರೆ. ತೀರ್ಪನ್ನು ಓದಿದ ನ್ಯಾಯಾಧೀಶ ಮಹೇಶ್ವರಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿ ಒದಗಿಸುವುದರಿಂದ ಸಂವಿಧಾನದ ಮೂಲ ರಚನೆ ಉಲ್ಲಂಘಿಸುವುದಿಲ್ಲ ಎಂದರು.
ಮೀಸಲಾತಿ ನೀತಿಯನ್ನು ಪುನರ್ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ನ್ಯಾಯಾಧೀಶರಾದ ತ್ರಿವೇದಿ ಮತ್ತು ಪಾರ್ದಿವಾಲಾ ಹೇಳಿದರು. ಆದಾಗ್ಯೂ, ನ್ಯಾಯಾಧೀಶರಾದ ಎಸ್. ರವೀಂದ್ರ ಭಟ್ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ. 10 ರಷ್ಟು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಬಡವರನ್ನು ಇದರಿಂದ ಹೊರಗಿಡುವುದು ತಾರತಮ್ಯವಾಗುತ್ತದೆ ಎಂದು ಅಸಮ್ಮತಿ ವ್ಯಕ್ತಪಡಿಸಿದರು.
ಇತರೆ ವಿಷಯಗಳು :
ರಾಜಸ್ಥಾನದ ನಾಥದ್ವಾರದ ಶಿವನ ಪ್ರತಿಮೆ ಲೋಕಾರ್ಪಣೆ
25 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳ ಸಂಚಾರ 2023 ಕ್ಕೆ
Comments are closed, but trackbacks and pingbacks are open.