ಚುನಾವಣೆಪೂರ್ವದಲ್ಲಿ ಐದು ಗ್ಯಾರಂಟಿಗಳ ಭರವಸೆ ನೀಡಿ ಬಳಿಕ ಭರ್ಜರಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಉಚಿತ ಯೋಜನೆ ಸಂಬಂಧ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದೆ.
ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸುವ ಶಕ್ತಿ ಯೋಜನೆ, ಪದವೀಧರ ಹಾಗೂ ಡಿಪ್ಲೊಮಾ ಮುಗಿಸಿದ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ನೀಡುವ ಯುವನಿಧಿ, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ದಾರರಿಗೆ ಅನ್ನಭಾಗ್ಯ, ಬಡ ಮಹಿಳೆಯರಿಗೆ ನಗದು ನೆರವಿನ ಗೃಹಲಕ್ಷ್ಮೀ ಮಾತ್ರವಲ್ಲದೆ, ಪ್ರತಿ ಮನೆಗೆ 200 ಯುನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಐದು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೆ ತಂದಿದೆ.
ಇದೀಗ ಉಚಿತ ಯೋಜನೆ ಸಂಬಂಧ ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಸಣ್ಣ ನೇಕಾರರಿಗೆ 10 ಎಚ್ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಘೋಷಿಸಿದ್ದಾರೆ.
ಈ ಯೋಜನೆಯ ಬಗ್ಗೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೇಕಾರರ ನಿಯೋಗದ ಜತೆ ಚರ್ಚಿಸಿದ ಬಳಿಕ ಸಿಎಂ ನಿರ್ಣಯ ಪ್ರಕಟಿಸಿದರು ಎಂದು ತಿಳಿದುಬಂದಿದೆ. ಧನ್ಯವಾದಗಳು..
ಇತರೆ ವಿಷಯಗಳು:
ಬಿಪಿಎಲ್ ಕಾರ್ಡ್‌ದಾರರಿಗೆ ಭರ್ಜರಿ ಕೊಡುಗೆ.! ಉಚಿತ ಅಕ್ಕಿ ಅಷ್ಟೇ ಅಲ್ಲ, ವೈದ್ಯಕೀಯ ಸೌಲಭ್ಯವೂ ಫ್ರೀ
Comments are closed, but trackbacks and pingbacks are open.