ಅಂಚೆ ಕಛೇರಿ ಬ್ಯಾಂಕ್ ನೇಮಕಾತಿ 2024, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ 47 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಕಾರ್ಯನಿರ್ವಾಹಕ ಹುದ್ದೆಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ನಿರ್ದಿಷ್ಟ ಹುದ್ದೆಗಳನ್ನು ಅವಲಂಬಿಸಿ ಬದಲಾಗಬಹುದು, IPPB ಕಾರ್ಯನಿರ್ವಾಹಕ ನೇಮಕಾತಿ 2024 ರ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ಅನ್ನು ನಡೆಸಲಾಗುತ್ತಿದೆ.
ಶೈಕ್ಷಣಿಕ ವಿವರಗಳು :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ Graduation, MBA ಯನ್ನು ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ಅಧಿಕೃತ ಅಧಿಸೂಚನೆಯನ್ನು ನೋಡಿ.
ಅಭ್ಯರ್ಥಿಯ ವಯೋಮಿತಿ :
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 47 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಪೂರೈಸಿರುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು ನಾವು ನೋಡುವುದಾದರೆ ವರ್ಗಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 35 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ವರ್ಗದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PWD (UR) ಅಭ್ಯರ್ಥಿಗಳಿಗೆ: 10 ವರ್ಷಗಳು
PWD [OBC (NCL)] ಅಭ್ಯರ್ಥಿಗಳಿಗೆ: 13 ವರ್ಷಗಳು
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳು
ಸಂಬಳದ ವಿವರಗಳು (ವೇತನ) :
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಖಾಲಿ ಇರುವಂತಹ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಂತಿಮವಾಗಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನವನ್ನು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ,ರೂ. 30000/- ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರಗಳು :
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ 47 ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನ ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆಯನ್ನು ಸಂಪೂರ್ಣಗೊಳಿಸಿ
SC/ST/PWD ಅಭ್ಯರ್ಥಿಗಳಿಗೆ : ರೂ. 150/-
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 750/-
ಪಾವತಿ ವಿಧಾನ : ಆನ್ಲೈನ್
ಆಯ್ಕೆ ಪ್ರಕ್ರಿಯೆ ವಿವರಗಳು :
ಆನ್ಲೈನ್ ಪರೀಕ್ಷೆ
ಗುಂಪು ಚರ್ಚೆ
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ :
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕವು 15 ಮಾರ್ಚ್ 2024. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05 ಏಪ್ರಿಲ್ 2024. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/03/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/04/2024
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
2 : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
Comments are closed, but trackbacks and pingbacks are open.