ಕೇದಾರನಾಥಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುವ ಹೆಲಿಕ್ಯಾಪ್ಟರ್ ಪತನ
ಮಂಗಳವಾರ ಬೆಳಗ್ಗೆ ಕೇದಾರನಾಥ ಬಳಿ ಇರುವ ಲಿಂಚೋಲಿ ಮತ್ತು ಗರುಡ್ ಚಟ್ಟಿ ನಡುವೆ ಘಟನೆ ನಡೆದಿದ್ದು, ಕೇದಾರನಾಥ ಮತ್ತು ಲಿಂಚೋಲಿಯಿಂದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿವೆ ಎಂದು ಎಸ್ಡಿಆರ್ಎಫ್ ತಂಡಗಳಿಂದ ಮಾಹಿತಿ ಬಂದಿದೆ. ಶೋಧನೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಲಿಕಾಪ್ಟರ್ ಆರ್ಯನ್ ಕಂಪನಿಯದ್ದಾಗಿದ್ದು, ಅದರಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದರು. ಮಂಜಿನ ಕಾರಣ, ಕಡಿಮೆ ಗೋಚರತೆ ಇತ್ತು ಮತ್ತು ಹೆಲಿಕಾಪ್ಟರ್ ಬೆಟ್ಟಕ್ಕೆ ಡಿಕ್ಕಿ ಹೊಡೆದ ನಂತರ ಪತನಗೊಂಡಿದೆ, ”ಎಂದು ಮೂಲಗಳು ತಿಳಿಸಿವೆ.
ಅಪಘಾತದ ನಂತರ ಹೆಲಿಕ್ಯಾಪ್ಟರ್ ಹಲವಾರು ತುಂಡುಗಳಾಗಿ ಮುರಿದು ಬೆಂಕಿಯಲ್ಲಿ ಮುಳುಗಿತು ಎಂದು ತಿಳಿಸಲಾಗಿದೆ. ವಿಮಾನದಲ್ಲಿದ್ದ ಎಲ್ಲ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ತಿಳಿಸಿದ್ದಾರೆ.
ಸ್ಥಳದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪಡೆ ಅಂದರೆ (ಎಸ್ಡಿಆರ್ಎಫ್) ತಂಡ ಮತ್ತು ಜಿಲ್ಲಾ ಪೊಲೀಸ್ ತಂಡಗಳೊಂದಿಗೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಈ ಪ್ರದೇಶದಲ್ಲಿ ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ಮೂಲಗಳು ತಿಳಿಸಿವೆ.
ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಪೂರ್ವ ರಾಮಾನುಜ್, ಕೃತಿ, ಉರ್ವಿ, ಸುಜಾತ, ಪ್ರೇಮ್ ಕುಮಾರ್, ಕಲಾ ಮತ್ತು ಪೈಲಟ್ ಅನಿಲ್ ಸಿಂಗ್ ಎಂದು ಗುರುತಿಸಲಾಗಿದೆ.
ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಕೂಡ ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತ ಘಟನೆಯ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಲಾಗಿದೆ ಹಾಗೂ ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ ಅತ್ಯಂತ ದುರದೃಷ್ಟಕರ. ನಷ್ಟದ ಪ್ರಮಾಣವನ್ನು ಖಚಿತಪಡಿಸಿಕೊಳ್ಳಲು ನಾವು ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಅಪಘಾತದಿಂದ ದುಃಖವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ ಎಂದು ಪ್ರಧಾನಿ ಮೋದಿ ಟ್ಟೀಟ್ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
Comments are closed, but trackbacks and pingbacks are open.