ಅನ್ನಭಾಗ್ಯ ಯೋಜನೆ ಪಡಿತರ ಚೀಟಿದಾರರೇ ಗಮನಿಸಿ, ಅಕ್ಕಿ ಬದಲು ಹಣ ವರ್ಗಾವಣೆ ಕುರಿತು ಹೊಸ ಸೂಚನೆ ಹೊರಡಿಸಿದ ಸರ್ಕಾರ.

ಅನ್ನಭಾಗ್ಯ ಯೋಜನೆ ಪಡಿತರ ಚೀಟಿದಾರರೇ ಗಮನಿಸಿ, ಅಕ್ಕಿ ಬದಲು ಹಣ ವರ್ಗಾವಣೆ ಕುರಿತು ಹೊಸ ಸೂಚನೆ ಹೊರಡಿಸಿದ ಸರ್ಕಾರ.

ಕರ್ನಾಟಕ ರಾಜ್ಯ ಸರ್ಕಾರದ ಆದೇಶ ದಿನಾಂಕ:06-07-2023 ರನ್ವಯ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ ರೂ.34 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು.

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ 3 ಅಥವಾ 3 ಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯವನ್ನು ನೀಡಲಾಗುವುದಿಲ್ಲ ಎಂದು ಸರ್ಕಾರ ತಿಳಿಸಿದೆ. ಆದರೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಕುಟುಂಬದಲ್ಲಿ 4 ಸದಸ್ಯರ ಮೇಲ್ಪಟ್ಟವರಿಗೆ ಈ ಸೌಲಭ್ಯ ಅನ್ವಯಿಸುತ್ತದೆ.

ನೀವು ಕಳೆದ 3 ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತವೆ ಎಂದು ಹೇಳುತ್ತಾರೆ.

ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಯನ್ನು ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಅದನ್ನು ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಜುಲೈ ತಿಂಗಳ 20 ನೇ ತಾರೀಖಿನೊಳಗೆ ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಿದ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಿನಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರಕುತ್ತದೆ ಎಂದು ಹೇಳಲಾಗಿದೆ.

ಇ-ಕೆವೈಸಿ ಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿನಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.

ನಿಮ್ಮ ಬಯೋಮೆಟ್ರಿಕ್ ಪರಿಶೀಲನೆ ಬದಲಿಗೆ ಮೊಬೈಲ್ ಓಟಿಪಿ ಮುಖಾಂತರ ಆಹಾರ ಧಾನ್ಯವನ್ನು ಪಡೆಯುತ್ತಿರುವ ವ್ಯವಸ್ಥೆಯನ್ನು ಮುಂದಿನ 2 ತಿಂಗಳ ಒಳಗಾಗಿ ಸ್ಥಗಿತಗೊಳಿಸಲಾಗುವುದು.

ಇತರೆ ವಿಷಯಗಳು :

ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್, ಸಿಗಲಿದೆ 3 ಲಕ್ಷ ಸಾಲ ಅದರಲ್ಲಿ 1 ಲಕ್ಷ 50 ಸಾವಿರ ಸಬ್ಸಿಡಿ, ಈಗಲೇ ಅರ್ಜಿ ಸಲ್ಲಿಸಿ ಕೇವಲ ಐದು ದಿನಗಳಲ್ಲಿ ನಿಮ್ಮ ಬ್ಯಾಂಕ್ ಖಾತೆ ಹಣ ಜಮಾ ಆಗುತ್ತದೆ.

ಮದ್ಯಪ್ರಿಯರಿಗೆ ಶಾಕ್, ಜುಲೈ 20 ರಿಂದ ಬೆಲೆ ಏರಿಕೆ, ಯಾವ ಬ್ರಾಂಡ್​ಗೆ ಎಷ್ಟು ಬೆಲೆ ಹೆಚ್ಚಳ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುವ ಮಹಿಳೆಯರ ಗಮನಕ್ಕೆ, 2000 ರೂ. ಪಡೆಯಲು ನೀವು ಅರ್ಹರಾ?, ಇಲ್ಲಿದೆ ಡೈರೆಕ್ಟ್ ಲಿಂಕ್ ಚೆಕ್ ಮಾಡಿಕೊಳ್ಳಿ.

ಪೋಸ್ಟ್ ಆಫೀಸ್ನ ಹೊಸ ಸ್ಕೀಮ್, ಈ ಯೋಜನೆಯಡಿ 100 ರೂಪಾಯಿ ಹೂಡಿಕೆ ಮಾಡಿ ಸಾಕು 20 ಲಕ್ಷ ಸಿಗತ್ತೆ, ತಪ್ಪದೇ ಈ ಸ್ಕೀಮ್ ನ ಮಾಹಿತಿ ತಿಳಿಯಿರಿ.

Comments are closed, but trackbacks and pingbacks are open.