ಪ್ರಧಾನಿಯಿಂದ ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ
ಕಂಚಿನ ಪ್ರತಿಮೆ ಲೋಕಾರ್ಪಣೆ
ಈ ವಿಷಯದಲ್ಲಿ ಪ್ರಧಾನ ಮಂತ್ರಿಯಿಂದ ಲೋಕಾರ್ಪಣೆಗೊಳ್ಳುವ ಕೆಂಪೇಗೌಡರ ಕಂಚಿನ ಪ್ರತಿಮೆ ಬಗ್ಗೆ ಹಾಗೂ ಕಾರ್ಯಕ್ರಮವನ್ನು ನಡೆಸುವ ಕುರಿತು ವಿಷಯಗಳನ್ನು ತಿಳಿಸಲಾಗಿದೆ. ಕೆಂಪೇಗೌಡರು ಬೆಂಗಳೂರಿನಲ್ಲಿ ಯಾವ ರೀತಿ ಆಳ್ವಿಕೆಯನ್ನು ಮಾಡಿದರು ಎಂಬುದನ್ನು ತಿಳಿಸಲಾಗಿದೆ.
Dedication of bronze statue
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.
ಕೆಂಪೆಗೌಡರ ಪ್ರಗತಿ ಪ್ರತಿಮೆ – ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ.
ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣದ ಆವರಣದ 23 ಎಕರೆಯ ಕೆಂಪೆಗೌಡ ಥೀಮ್ ಪಾರ್ಕ್ ನಲ್ಲಿ ಬಳಸಿಕೊಳ್ಳಲಾಗುವುದು. ನಿಲ್ದಾಣದ ಆವರಣದಲ್ಲಿ ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಿತ್ತು. ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನುಮುಂದೆ, ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರವಾಗಲಿದೆ.
ನಾಡಪ್ರಭು ಹಿರಿಯ ಕೆಂಪೇಗೌಡ, ಅವರು ಕೆಂಪೇಗೌಡ ಎಂದೇ ಕರೆಯಲ್ಪಡುವವರು ವಿಜಯನಗರ ಸಾಮ್ರಾಜ್ಯದ ಅಡಿಯಲ್ಲಿ ಒಬ್ಬ ಮುಖ್ಯಸ್ಥರಾಗಿದ್ದರು. ಭಾರತದ ಕರ್ನಾಟಕ ರಾಜ್ಯದ ರಾಜಧಾನಿಯಾಗಿರುವ ಬೆಂಗಳೂರು ನಗರವನ್ನು 1537 ರಲ್ಲಿ ಕೆಂಪೇಗೌಡರು ಭದ್ರಪಡಿಸಿದರು. ಕೆಂಪೇಗೌಡರು 16 ನೇ ಶತಮಾನದ ಉತ್ತಮ ಭಾಗದಲ್ಲಿ ಕರ್ನಾಟಕದ ಹೆಚ್ಚಿನ ಭಾಗಗಳನ್ನು ಆಳಿದ ಮುಖ್ಯಸ್ಥರಾಗಿದ್ದರು. 1532 ರಲ್ಲಿ ಬೆಂಗಳೂರು ನಗರವಾಗುವುದಕ್ಕೆ ಅಡಿಪಾಯ ಹಾಕಿದರು.
ಈ ಹಿನ್ನೆಲೆ ಅ.21 ರಿಂದ ನ.7 ರವರೆಗೆ ರಾಜ್ಯಾದ್ಯಂತ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯಲಿದೆ. ಅಭಿಯಾನಕ್ಕಾಗಿ ‘ನಾಡಪ್ರಭು ಕೆಂಪೇಗೌಡ ರಥ’ಗಳನ್ನು ಸಿದ್ಧ ಮಾಡಲಾಗಿದ್ದು ಅಕ್ಟೋಬರ್ 21ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಸೂಕ್ತ ಸಮಿತಿಗಳನ್ನು ರಚಿಸಲಾಗಿದೆ. ಈ ರಥಗಳು ಆಯಾಯ ಪ್ರದೇಶ/ಜಿಲ್ಲೆಗಳನ್ನು ಪ್ರವೇಶಿಸಿದಾಗ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುವುದು. ಪ್ರತಿಯೊಂದು ರಥದ ಮಾರ್ಗನಕ್ಷೆಯನ್ನೂ ಸಿದ್ಧಪಡಿಸಲಾಗಿದೆ. ಆಯಾಯ ಜಿಲ್ಲೆಗಳಲ್ಲಿ ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರ ರೈತರು, ಸ್ವಸಹಾಯ ಸಂಘಗಳ ಸದಸ್ಯರು, ಹಿರಿಯ ನಾಗರಿಕರು, ಹಾಲು ಉತ್ಪಾದಕರ ಒಕ್ಕೂಟಗಳು, ಕೈಗಾರಿಕಾ ಸಂಘಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ಇಡೀ ಕಾರ್ಯಕ್ರಮ ಮತ್ತು ಅಭಿಯಾನಗಳು ಪಕ್ಷಾತೀತವಾದ ಕಾರ್ಯಕ್ರಮವಾಗಿರಲಿದೆ. ಇಂಥದೊಂದು ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಅಗತ್ಯ ಸಲಹೆ, ಸೂಚನೆಗಳನ್ನು ಕೊಡಲಾಗಿದೆ.
ಪವಿತ್ರ ಮೃತ್ತಿಕಾ ಅಭಿಯಾನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಕೂಡ ಸರ್ಕಾರದ ಪರವಾಗಿ ಆಹ್ವಾನ ಮಾಡಲಾಗಿದೆ. ವಿರೋಧ ಪಕ್ಷದವರಿಗೂ ಆಹ್ವಾನ ನೀಡಲಾಗುತ್ತದೆ ಹಾಗೂ ಸಿಎಂ ನೇತೃತ್ವದಲ್ಲಿ ಭೇಟಿಯಾಗಿ ಆಹ್ವಾನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಇತರೆ ವಿಷಯಗಳು :
ವಿವಿಧ ಉಡುಪುಗಳಿಗೆ ದೀಪಾವಳಿ ಹಬ್ಬದ ಭರ್ಜರಿ ಆಫರ್ ಗಳು
ಕೇದಾರನಾಥಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುವ ಹೆಲಿಕ್ಯಾಪ್ಟರ್ ಪತನ
ಸ್ಮಾರ್ಟ್ಫೋನ್ ಗಳಿಗೆ ದೀಪಾವಳಿಯಲ್ಲಿ ಭರ್ಜರಿ ಆಫರ್ ಗಳು
Comments are closed, but trackbacks and pingbacks are open.