ಜಿಲ್ಲಾ ನ್ಯಾಯಾಲಯ ನೇಮಕಾತಿ 2024, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಹಲೋ ಸ್ನೇಹಿತರೇ, ಇಂದಿನ ಉದ್ಯೋಗ ಮಾಹಿತಿಗೆ ಎಲ್ಲರಿಗೂ ಸ್ವಾಗತ, ಬಳ್ಳಾರಿ ಜಿಲ್ಲಾ ನ್ಯಾಯಾಲಯ (District Court) ಇಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಮತ್ತು ಬೆರಳಚ್ಚು-ನಕಲುಗಾರರು ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು ಬೆರಳಚ್ಚುಗಾರರು ಮತ್ತು ಬೆರಳಚ್ಚು-ನಕಲುಗಾರರು, ಒಟ್ಟು ಹುದ್ದೆಗಳು 19, ಉದ್ಯೋಗ ಸ್ಥಳ ಬಳ್ಳಾರಿ – ಕರ್ನಾಟಕ
ವಿದ್ಯಾರ್ಹತೆ:
ಬೆರಳಚ್ಚುಗಾರರು: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಸೀನಿಯರ್ ಗ್ರೇಡ್ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚು-ನಕಲುಗಾರರು: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣ.
ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.
ಅರ್ಜಿಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ- 2ಎ, 2ಬಿ, 2ಎ, & 3ಬಿ ಅಭ್ಯರ್ಥಿಗಳಿಗೆ: ₹250/-
ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ , ಪ್ರವರ್ಗ-1 & ಅಂಗವಿಕಲ ಅಭ್ಯರ್ಥಿಗಳಿಗೆ: ₹100/-
ವೇತನ ಶ್ರೇಣಿ:
ಮಾಸಿಕ ₹21,400–42,000/- ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-04-2024
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-05-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 08-05-2024
Comments are closed, but trackbacks and pingbacks are open.