ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ, ಈ ಜಿಲ್ಲೆಯ ಯುವಕ-ಯುವತಿಯರಿಗೆ ಮಾತ್ರ, ಹೆಚ್ಚಿನ ಮಾಹಿತಿಗಾಗಿ ಇಲ್ಲಿರುವ ನಂಬರ್ ಗೆ ಸಂಪರ್ಕಿಸಿ.
ರುಡ್‌ಸೆಟ್ ಸಂಸ್ಥೆಯಿಂದ ನಡೆಸಲಾಗುವ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯ ಅರ್ಜಿ ಆಹ್ವಾನವನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಯುವಕ-ಯುವತಿಯರಿಗೆ ಅನುಮತಿಸಲಾಗಿದೆ.
ಈ ತರಬೇತಿಯನ್ನು ಕನ್ನಡ ಭಾಷೆಯಲ್ಲಿ ಓದಲು ಮತ್ತು ಬರೆಯಲು ಬಲ್ಲ ಆಸಕ್ತರು, 18 ರಿಂದ 45 ವರ್ಷ ವಯೋಮಾನದವರು, ಬಿಪಿಎಲ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.
ತರಬೇತಿಯ ಪ್ರಾರಂಭದಿಂದ ಕೊನೆಯವರೆಗೂ ವಸತಿಯುತವಾಗಿರುವ ಆಸಕ್ತರಿಗೆ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುತ್ತದೆ. ತರಬೇತಿ ಮುಕ್ತಾಯವಾದ ನಂತರ, ಅಧಿಕೃತ ಪ್ರಮಾಣಪತ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಹಾಗೂ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ್ ಅವರ ಮೊಬೈಲ್ ಸಂಖ್ಯೆಗಳು: 9113880324, 9740982585 ಈ ವಿಳಾಸಕ್ಕೆ ಸಂಪರ್ಕಿಸಬಹುದು.
Comments are closed, but trackbacks and pingbacks are open.