ಈ ಜಿಲ್ಲೆಯ ಮಹಿಳೆಯರಿಗೆ ಗುಡ್ ನ್ಯೂಸ್, ಉಚಿತ ಹೊಲಿಗೆ ಯಂತ್ರಕ್ಕಾಗಿ ಅರ್ಜಿ ಆಹ್ವಾನ, ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಕಲಬುರಗಿ ಜಿಲ್ಲೆಯಲ್ಲಿ ಹೊಲಿಗೆ ಯಂತ್ರ ಪಡೆಯಬೇಕಾದ ಸುವರ್ಣ ಅವಕಾಶ. ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ ಮಹಿಳೆಯರಿಗೆ ಸುವರ್ಣಾವಕಾಶ ಹೊಲಿಗೆ ಯಂತ್ರ ಪಡೆಯಲು ಒಳ್ಳೆಯ ಸಮಯ ನೀಡುತ್ತದೆ. ಕಲಬುರಗಿ ಜಿಲ್ಲಾ ಪಂಚಾಯತಿಯ ಕೈಗಾರಿಕಾ ವಿಭಾಗದಿಂದ ಜಿಲ್ಲಾ ವಲಯ ಯೋಜನೆಯಡಿ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ.

ಪ್ರಸಕ್ತ 2023-24 ಸಾಲಿಗೆ ಕಲಬುರಗಿ ಜಿಲ್ಲಾ ಪಂಚಾಯತಿಯ ಕೈಗಾರಿಕಾ ವಿಭಾಗದಿಂದ ಜಿಲ್ಲಾ ವಲಯ ಯೋಜನೆಯಡಿ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಪಡೆಯಲು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಹೊಲಿಗೆ ವೃತ್ತಿನಿರತ ಮಹಿಳೆಯರಿಗೆ ಈ ಅವಕಾಶ ಕೊಡಲಾಗಿದೆ.
ವಿದ್ಯುತ್ ಚಾಲಿತ ಹೊಲಿಗೆ ಯಂತ್ರಕ್ಕಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ದಿ.01-09-2023ರವರೆಗೆ ಅಭ್ಯರ್ಥಿಯ ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷದೊಳಗಿರಬೇಕು.
ಅರ್ಜಿದಾರರು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.
ಸರ್ಕಾರದ ಯಾವುದೇ ಯೋಜನೆಯಡಿ ಈಗಾಗಲೇ ಹೊಲಿಗೆಯಂತ್ರವನ್ನು ಪಡೆದಿರುವ ಫಲಾನುಭವಿಗಳು, ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ (ಗ್ರಾ.ಕೈ) ಅಬ್ದುಲ್ ಅಜೀಮ್ ಅವರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಮಹಿಳೆಯರು https://kalaburagi.nic.in ಅಥವಾ https://zpkalaburagi.karnataka.gov.in ವೆಬ್‌ಸೈಟ್‌ನಲ್ಲಿ ಅವಶ್ಯ ಮಾಹಿತಿಯನ್ನು ಭರ್ತಿ ಮಾಡಿ, ಸಂಬಂಧಿಸಿದ ಪೂರಕ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ಅಪಲೋಡ್ ಮಾಡುವ ಮೂಲಕ 2023ರ ಸೆಪ್ಟೆಂಬರ್ 31 ರೊಳಗಾಗಿ ಆನ್‌ಲೈನ್‌ದಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಸದರಿ ವೆಬ್‌ಸೈಟ್ ಅಥವಾ ಉಪನಿರ್ದೇಶಕರು (ಗ್ರಾಮೀಣ ಕೈಗಾರಿಕೆ), ಕೈಗಾರಿಕಾ ವಿಭಾಗ, ಜಿಲ್ಲಾ ಪಂಚಾಯತ, ಎಲ್-10, ಕೈಗಾರಿಕಾ ವಸಾಹತು, ಸಾಗರ ಮಾರ್ಬಲ್ಸ್ ಎದುರುಗಡೆ, ಜೇವರ್ಗಿ ಕ್ರಾಸ್ ಹತ್ತಿರ, ಕಲಬುರಗಿ-585102 ಕಚೇರಿಯನ್ನು, ದೂ.ಸಂ.08472-221784, 295784 ಅಥವಾ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಇತರೆ ವಿಷಯಗಳು:
ಅನ್ನದಾತನಿಗೆ ಸರ್ಕಾರದ ಶಾಕ್.! ಈ ನೋಟಿಸ್ ನಿಮಗೂ ಬಂತಾ? ಅಷ್ಟೇ ಕಥೆ; ಏನಿದು ಸುದ್ದಿ?
ಚಂದ್ರನ ಮೇಲೆ ಹತ್ತಿ ತೋಟ ಬೆಳೆದ ಚೀನಾ.! ಹತ್ತಿ ಕೀಳೋಕೆ ದಿನಾಂಕ ನಿಗದಿ
Comments are closed, but trackbacks and pingbacks are open.