ಜಾಗತಿಕ ಹೂಡಿಕೆದಾರರ ಸಮಾವೇಶ | Global Capital Investors Conforence in kannada
ನವೆಂಬರ್ 2 ರಿಂದ ನವೆಂಬರ್ 4 ರವರೆಗೂ ನಡೆಯಲಿರುವ ‘ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ’ದ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.
Global Capital Investors Conforence in kannada
ಜಾಗತಿಕ ಹೂಡಿಕೆದಾರರ ಸಮಾವೇಶ
ನವೆಂಬರ್ 2 ರಿಂದ ನವೆಂಬರ್ 4 ರವರೆಗೂ ನಡೆಯಲಿರುವ ‘ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ’ ಕಾರ್ಯಕ್ರಮಕ್ಕಾಗಿ, ದೇಶದ ಹಲವು ಭಾಗಗಳಿಂದ ಬಂಡವಾಳ ಹೂಡಿಕೆದಾರರು ನಗರಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ, ಪಾಲಿಕೆಯು ಸ್ವಚ್ಛತಾ ಅಭಿಯಾನ ಆರಂಭಿಸಿದ್ದು, ಇದಕ್ಕಾಗಿ ಸಮಾರೋಪಾದಿಯಲ್ಲಿ ಸಜ್ಜಾಗುತ್ತಿದೆ. ಸಮಾವೇಶಕ್ಕೆ ಬೆಂಗಳೂರು ಪ್ಯಾಲೇಸ್ ಸಿದ್ದಗೊಂಡಿದ್ದು ವಿಶ್ವದ ಮುಂಚೂಣಿಯಲ್ಲಿರುವ ಉದ್ದಿಮೆದಾರರು, ವ್ಯವಸ್ಥಾಪಕ ನಿರ್ದೇಶಕರು, ಸಿಇಒಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಬಿಲ್ಡ್ ಫಾರ್ ದಿ ವಲ್ರ್ಡ್ ಎಂಬ ಪರಿಕಲ್ಪನೆಯೊಂದಿಗೆ ಮೂರು ದಿನಗಳ ಕಾಲ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2022 ಜಾಗತಿಕ ಸಮಾವೇಶಕ್ಕೆ ಫ್ರಾನ್ಸ್, ನೆದರ್ಲ್ಯಾಂಡ್, ಜರ್ಮನಿ, ಜಪಾನ್, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳನ್ನು ಪಾಲುದಾರ ರಾಷ್ಟ್ರಗಳನ್ನಾಗಿ ಮಾಡಿಕೊಳ್ಳಲಾಗಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ.
ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯುವ ಭರವಸೆಯನ್ನು ನೀಡಲಾಗಿದೆ.
ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ.
ಸಮಾವೇಶವನ್ನು ಪ್ರಧಾನಿ ನರೇಂದ್ರಮೋದಿ ವಿಡಿಯೋ ಕಾನರೆನ್ಸ್ ಮೂಲಕ ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವರಾದ ಸ್ಮತಿ ಇರಾನಿ, ಭಗವಂತ ಖೂಬಾ, ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ.
ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹೀ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ.
ಇತರೆ ವಿಷಯಗಳು :
ರಾಜಸ್ಥಾನದ ನಾಥದ್ವಾರದ ಶಿವನ ಪ್ರತಿಮೆ ಲೋಕಾರ್ಪಣೆ
ವಿಶ್ವದ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಕೆಎಲ್‌ಇ ಸಂಶೋಧಕರು
Comments are closed, but trackbacks and pingbacks are open.