ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮತ್ತೆ 2 ಹೊಸ ರೂಲ್ಸ್ ಹೊರಡಿಸಿದ ಸರ್ಕಾರ, ರಾಜ್ಯದ ಎಲ್ಲ ಅರ್ಜಿ ಸಲ್ಲಿಸಿದ ಮಹಿಳೆಯರು ಈ 2 ಹೊಸ ನಿಯಮಗಳನ್ನು ಪಾಲಿಸಲೇಬೇಕು.
ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮತ್ತೆ 2 ಹೊಸ ರೂಲ್ಸ್ ಹೊರಡಿಸಿದ ಸರ್ಕಾರ, ರಾಜ್ಯದ ಎಲ್ಲ ಅರ್ಜಿ ಸಲ್ಲಿಸಿದ ಮಹಿಳೆಯರು ಈ 2 ಹೊಸ ನಿಯಮಗಳನ್ನು ಪಾಲಿಸಲೇಬೇಕು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ತುಂಬಿಸುವ ಸಲುವಾಗಿ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅನೇಕ ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ ಇತ್ತೀಚಿಗೆ ಅರ್ಜಿ ಸಲ್ಲಿಸುವ ವಿಚಾರವಾಗಿ ಕೇಂದ್ರದಲ್ಲಿರುವವರು ಹೆಚ್ಚಿನ ಹಣ ಪಡೆಯುತ್ತಾರೆ ಎಂಬ ಮಾಹಿತಿ ಹರಡಿತ್ತು. ಅದರ ಬೆನ್ನಲ್ಲೇ ಬಾಗಲಕೋಟೆಯ ಕೆಲ ಸೇವಾ ಕೇಂದ್ರಗಳಲ್ಲಿನ ಕೆಲಸಗಾರರನ್ನು ವಜಾ ಮಾಡಲಾಗಿತ್ತು.
ಅದರ ಬೆನ್ನಲ್ಲೇ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಶುಲ್ಕ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ನೀಡಿದ್ದಾರೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ಸರ್ಕಾರವೇ ಸೇವಾ ಕೇಂದ್ರಗಳಿಗೆ ಶುಲ್ಕ ನೀಡುತ್ತಿದೆ.
ಒಂದು ವೇಳೆ ಹಣ ಪಡೆದರೇ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ, ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾರೇ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆಯುತ್ತದೆ ಅಂತವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ.
ಈಗಾಗಲೆ 3 ಜನರ ಲಾಗಿನ್ ಐಡಿ ವಾಪಸ್ ಪಡೆಯಲಾಗಿದೆ ಎಂದು ಸಚಿವೆ ಮಾಹಿತಿ, ಸರಕಾರದಿಂದಲೇ ಪ್ರತಿ ಅರ್ಜಿಗೆ 12 ರೂಪಾಯಿ ನೀಡಲಾಗುತ್ತಿದೆ. 10 ರೂಪಾಯಿ ಅಪ್‌ಲೋಡ್ ಮಾಡಲು, 2 ರೂಪಾಯಿ ಪ್ರಿಂಟ್ ಔಟ್ ಕೊಡಲು ನೀಡಲಾಗಿದೆ ಎಂದು ಸಚಿವೆ ಸ್ಪಷ್ಟನೆ ನೀಡಿದ್ದಾರೆ.
ಈ ಯೋಜನೆಯಲ್ಲಿ ಅರ್ಜಿ ಹಾಕಿದವರಿಗೆ ಮುಂದಿನ ತಿಂಗಳೇ ಮನೆ ಯಜಮಾನಿಗೆ 2 ಸಾವಿರ ಹಣ ಜಮಾ ಆಗಲಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಪೂರ್ಣ ಉಚಿತ ನೋಂದಣಿ ಗೃಹ ಲಕ್ಷ್ಮಿ ಯೋಜನೆಯನ್ನು ಮಹಿಳೆಯರು ಉಚಿತವಾಗಿ ಮಾಡಿಸಿಕೊಳ್ಳಬೇಕೆಂದು ಬಹಳಷ್ಟು ಕಷ್ಟಪಟ್ಟು ಜಾರಿ ಮಾಡಿದ್ದೇವೆ.
ಇದರಲ್ಲಿ ಹಣ ಪಡೆಯುತ್ತಿರುವುದು ಗಮನಕ್ಕೆ ಬಂದರೆ ಅಂತವರ ಲಾಗಿನ್ ಐಡಿ ಮತ್ತು ಪಾಸವರ್ಡ್ ವಾಪಸ್ ಪಡೆಯಲು ಸೂಚನೆ ಕೊಡಲಾಗಿದೆ. ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ತಹಸಿಲ್‌ದಾರ್, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ಯಾರಿಗೇ ಆಗಲಿ ಹಣ ಪಡೆಯುವುದು ಗಮನಕ್ಕೆ ಬಂದರೆ ತಕ್ಷಣ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಬೇಕು. ಅಸಡ್ಡೆ ಮಾಡಿದರೆ ಅವರೂ ಜವಾಬ್ದಾರರಾಗುತ್ತಾರೆ ಎಂದಿದ್ದರೆ.
ಆದರೆ ನಾವು ಯಾರಿಂದಲೂ ಉಚಿತವಾಗಿ ಕೆಲಸ ಮಾಡಿಸಿಕೊಳ್ಳುತ್ತಿಲ್ಲ, ಅಪ್‌ಲೋಡ್ ಮಾಡುವವರಿಗೆ ಸರಕಾರದಿಂದಲೇ ಪ್ರತಿ ಅರ್ಜಿಗೆ 12 ರೂಪಾಯಿ ನೀಡಲಾಗುತ್ತಿದೆ. 10 ರೂಪಾಯಿ ಅಪ್‌ಲೋಡ್ ಮಾಡಲು, 2 ರೂಪಾಯಿ ಪ್ರಿಂಟ್ ಔಟ್ ಕೊಡಲು ನೀಡಲಾಗಿದೆ. ಹಾಗಾಗಿ ಜನರು ಯಾರಿಗೂ ದುಡ್ಡು ಕೊಡಬೇಕಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇನ್ನು ಜುಲೈ 20 ರಿಂದ ರಾಜ್ಯಾದಿಂತ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಒನ್, ಗ್ರಾಮ್ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ಯೋಜನೆಗೆ ಅರ್ಜಿ ಭರಿಂದಿಂದ ಸಾಗುತ್ತಿದೆ. ಕೆಲವೆಡೆ ಸರ್ವರ್ ಸಮಸ್ಯೆ ಇದೆ.
ಇಂದು ಅಂತ್ಯಕ್ಕೆ ಯೋಜನೆಗೆ ಒಟ್ಟಾರೆ 22,90,782 ಮಹಿಳೆಯರಿಂದ ಅರ್ಜಿ ಸಲ್ಲಿಕೆ ಮಾಡಿದ್ದರು. ಭಾನುವಾರ ಸೇವಾ ಕೇಂದ್ರಗಳಿಗೆ ರಜೆ ಇತ್ತು. ಮತ್ತೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
Comments are closed, but trackbacks and pingbacks are open.