ನಾಳೆ ಮಧ್ಯಾಹ್ನ 1.30 ಕ್ಕೆ `ಗೃಹಲಕ್ಷ್ಮೀ’ ಯೋಜನೆ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಸ್ಟೆಪ್ ಬೈ ಸ್ಟೆಪ್ ಹೇಗೆ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿ ಇಲ್ಲಿದೆ
ನಾಳೆ ಮಧ್ಯಾಹ್ನ 1.30 ಕ್ಕೆ `ಗೃಹಲಕ್ಷ್ಮೀ’ ಯೋಜನೆ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಚಾಲನೆ, ಸ್ಟೆಪ್ ಬೈ ಸ್ಟೆಪ್ ಹೇಗೆ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿ ಇಲ್ಲಿದೆ
ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನ ಇರುವುದಿಲ್ಲ, ಆಗಸ್ಟ್ 18 ರಂದು ಬೆಳಗಾವಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು. ಅನುಮಾನ ಇದ್ದರೆ ನೀವು 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಹೇಳಿದ್ದಾರೆ.
ನಾಳೆ ಮಧ್ಯಾಹ್ನ 1.30 ಕ್ಕೆ ಶಕ್ತಿ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಪತಿ ತೆರಿಗೆ ಕಟ್ಟಿದ್ರೆ, ಗಂಡ ತೆರಿಗೆ ಪಾವತಿದಾರರಾಗಿದ್ದರೆ ಅರ್ಜಿ ಸ್ವೀಕಾರ ಆಗಲ್ಲ. ಇ-ಗವರ್ನೆನ್ಸ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿರುವುದರಿಂದ ಅನರ್ಹವಾಗಿ ಯೋಜನೆ ಲಾಭ ಪಡೆಯುವವರ ಬಗ್ಗೆ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ಯೋಜನೆಗೆ ಎಲ್ಲಿ ಮತ್ತು ಯಾವಾಗ ಅರ್ಜಿ ಸಲ್ಲಿಸಬೇಕು
ಅರ್ಹ ಮಹಿಳೆಯರು Sevasindhu.Karnataka.gov.in ವೆಬ್ಸೈಟ್ನಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು .
ಸರ್ಕಾರಿ ಕಚೇರಿಗಳಲ್ಲಿ ಮಹಿಳೆಯರು ದೈಹಿಕವಾಗಿಯೂ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಸರ್ಕಾರವು ಎಲ್ಲಾ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತದೆ ಮತ್ತು ಆಗಸ್ಟ್ 15 ರಿಂದ ಹಣವನ್ನು ನೀಡಲು ಪ್ರಾರಂಭಿಸುತ್ತದೆ .
ಯೋಜನೆಯ ಪ್ರಯೋಜನವನ್ನು ಪಡೆಯಲು, ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗಳೊಂದಿಗೆ ತಮ್ಮ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಬೇಕು.
ಇತರೆ ವಿಷಯಗಳು :
ಹೊಲಿಗೆ ಯಂತ್ರ ಉಚಿತ ಯೋಜನೆ 2023 ,ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ಮಾಹಿತಿ ಇಲ್ಲಿದೆ.
ಕುಸುಮ್ ಯೋಜನೆ ನೋಂದಣಿ 2023, ಈ ಸೋಲಾರ್ ಪಂಪಿನ ಸಂಪೂರ್ಣ ಮಾಹಿತಿಗಳು ಇಲ್ಲಿದೆ ನೋಡಿ
Comments are closed, but trackbacks and pingbacks are open.