ಜುಲೈ 16ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಯಾವೆಲ್ಲ ದಾಖಲಾತಿಗಳು ಬೇಕು? ಯಾರು ಅರ್ಹರು? ಹೇಗೆ ಅರ್ಜಿ ಸಲ್ಲಿಸಿವುದು?, ಇಲ್ಲಿದೆ ಸಂಪೂರ್ಣ ಮಾಹಿತಿ.

ಜುಲೈ 16ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಯಾವೆಲ್ಲ ದಾಖಲಾತಿಗಳು ಬೇಕು? ಯಾರು ಅರ್ಹರು? ಹೇಗೆ ಅರ್ಜಿ ಸಲ್ಲಿಸಿವುದು?, ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀಯೂ ಒಂದು. ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡುವ ಯೋಜನೆಯದು. ಈ ಹಣವನ್ನು ಪಡೆಯುವುದರಿಂದ ಮನೆಯ ಯಜಮಾನಿಗಳು ಸಂತೋಷದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಇದು ಒಂದು ಅತ್ಯಂತ ಉತ್ತೇಜನಕರ ಯೋಜನೆಯಾಗಿದೆ.

ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಜುಲೈ 16 ರಂದು ಯೋಜನೆಗೆ ಚಾಲನೆ ಸಿಗಲಿದೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರಿಂದ ಈ ಯೋಜನೆಗೆ ಚಾಲನೆ ಸಿಗಲಿದೆ.

ಜುಲೈ 16 ರಿಂದ 18ರ ತನಕ ಪ್ರತಿಪಕ್ಷ ನಾಯಕರ ಅಭೆ ನಡೆಯಲಿದೆ. ಈ ಸಭೆಯ ನಡುವೆ ಗೃಹಲಕ್ಷ್ಮೀ ಯೋಜನೆಗೆ ಜಾರಿ ನೀಡುವ ಪ್ಲ್ಯಾನ್ ನಡೆಯುತ್ತಿದೆ.

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ 14 ರಂದು ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡುವುದಾಗಿ ಈ ಹಿಂದೆ ಭರವಸೆ ನೀಡಿದ್ದರು.

ಈ ಯೋಜನೆಗೆ ಯಾರು ಅರ್ಹರು? ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಿರ್ಧರಿಸಿದ ಮಹಿಳೆಯರು ಈ ಯೋಜನೆಗೆ ಅರ್ಹರಾಗಿದ್ದಾರೆ.

ಈ ಯೋಜನೆಗೆ ನೋಂದಾಯಿಸಲು ಸಲ್ಲಿಸಬೇಕಾದ ದಾಖಲೆಗಳು ಯಾವುವು? ರೇಷನ್ ಕಾರ್ಡ್ ಪ್ರತಿ, ಯಜಮಾನಿ ಮತ್ತು ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಮತ್ತು ಯೋಜನೆಯ ನಗದು ಸೌಲಭ್ಯ ಪಡೆಯಲು ಇಚ್ಚಿಸುವ ಬ್ಯಾಂಕ್ ಖಾತೆಯ ಪಾಸ್ ಬುಕ್ ಪ್ರತಿ ಅಗತ್ಯವಿದೆ.

ಇತರೆ ವಿಷಯಗಳು :

ಉಚಿತ 200 ಯೂನಿಟ್ ಪಡೆಯುವ ಜನರಿಗೆ ಸರ್ಕಾರದಿಂದ ಮತ್ತೊಂದು ಹೊಸ ಗೂಡ್ ನ್ಯೂಸ್, ಇಂಧನ ಇಲಾಖೆಯಿಂದ ಹೊಸ ಯೋಜನೆ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಬಾಡಿಗೆ ಮನೆಯಲ್ಲಿ ಇರುವವರಿಗೆ ಸರ್ಕಾರ ಹೊಸ ಮಾರ್ಗ ಸೂಚನೆ ಹೊರಡಿಸಿದೆ, ಕಡ್ಡಾಯವಾಗಿ ಈ ಕೆಲಸ ನೀವು ಮಾಡಲೇಬೇಕು.

ಶಕ್ತಿ ಯೋಜನೆಗೆ ಮೆಚ್ಚುಗೆ, ವೀರೇಂದ್ರ ಹೆಗ್ಗಡೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಧರ್ಮಸ್ಥಳಕ್ಕೆ ಆಹ್ವಾನಿಸಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮ 7.06 ಲಕ್ಷ ಮನೆ ನಿರ್ಮಾಣ ಗುರಿ: ಸಚಿವ ಜಮೀರ್, ಈ ದಿನದಿಂದ ಅರ್ಜಿ ಸಲ್ಲಿಕೆ ಪ್ರಾರಂಭ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Comments are closed, but trackbacks and pingbacks are open.