ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಭಾರತೀಯ ಪೋಸ್ಟ್ ಆಫೀಸ್ (India Post Office ) ಇಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ವಿದ್ಯಾರ್ಹತೆ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷ ನಿಗದಿಪಡಿಸಲಾಗದೆ.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
ಅರ್ಜಿಶುಲ್ಕ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ₹19,900 – 63,200/- ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್, ಕೌಶಲ್ಯ ಪರೀಕ್ಷೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-04-2024
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-05-2024
Comments are closed, but trackbacks and pingbacks are open.