ಸಿಲಿಕಾನ್ ಸಿಟಿಯಲ್ಲಿ ಇನ್ನೂ 50 ಇಂದಿರಾ ಕ್ಯಾಂಟೀನ್‌ಗಳು ಬರಲಿವೆ,ಕ್ಯಾಂಟೀನ್‌ಗಳಲ್ಲಿ ಆಹಾರ ಮೆನು ಚೇಂಜ್! ಇಲ್ಲಿದೆ ನೋಡಿ ಕಂಪ್ಲೀಟ್ ರಿಪೋರ್ಟ್!

ಸಿಲಿಕಾನ್ ಸಿಟಿಯಲ್ಲಿ ಇನ್ನೂ 50 ಇಂದಿರಾ ಕ್ಯಾಂಟೀನ್‌ಗಳು ಬರಲಿವೆ,ಕ್ಯಾಂಟೀನ್‌ಗಳಲ್ಲಿ ಆಹಾರ ಮೆನು ಚೇಂಜ್! ಇಲ್ಲಿದೆ ನೋಡಿ ಕಂಪ್ಲೀಟ್ ರಿಪೋರ್ಟ್!

ಬೆಂಗಳೂರು: ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್ ನವೀಕರಣಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಒತ್ತು ನೀಡಿದ್ದಾರೆ . ಕೆಲ ದಿನಗಳ ಹಿಂದೆ ಕ್ಯಾಂಟೀನ್‌ಗಳಲ್ಲಿ ಹೊಸ ಆಹಾರ ಮೆನು ತಯಾರಿಸಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಮತ್ತೆ ಬೆಂಗಳೂರಿನಲ್ಲಿ 50 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ಸಿದ್ಧತೆ ನಡೆದಿದೆ.

ಇಂದಿರಾ ಕ್ಯಾಂಟೀನ್ ಗಳು ನಗರದ ಪ್ರತಿ ವಾರ್ಡ್ ಗಳಲ್ಲಿ ಬಡವರ ಹಸಿವು ನೀಗಿಸುತ್ತಿವೆ. ಕ್ಯಾಂಟೀನ್ ಕಟ್ಟಡ ಇಲ್ಲದ ವಾರ್ಡ್‌ಗಳಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಸೇವೆ ನೀಡುತ್ತಿವೆ. ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ 50 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು.

ಆರ್ಥಿಕ ಸಂಕಷ್ಟದ ನಡುವೆಯೂ ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ನಗರದಲ್ಲಿ ಈ ವರ್ಷ 50 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲು ನಿರ್ಧರಿಸಲಾಗಿದೆ.

ಟೆಲಿಗ್ರಾಮ್ ಗ್ರೂಪ್ ಜಾಯಿನ್ ಲಿಂಕ್ CLICK HERE

ಸರ್ಕಾರದ ಸೂಚನೆಯಂತೆ ಬಿಬಿಎಂಪಿ ಇಂದಿರಾ ಕ್ಯಾಂಟೀನ್‌ ಸಂಖ್ಯೆಯನ್ನು 198ರಿಂದ 250ಕ್ಕೆ ಏರಿಸಲು ನಿರ್ಧರಿಸಿದ್ದು, 24 ಸಂಚಾರಿ ಇಂದಿರಾ ಕ್ಯಾಂಟೀನ್‌ ಸೇರಿ 250 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲು ನಿರ್ಧರಿಸಿದೆ. ಇಂದಿರಾ ಕ್ಯಾಂಟೀನ್ ಹೈಟೆಕ್ ಮಾಡಲು ಹಾಗೂ ಉತ್ತಮ ಗುಣಮಟ್ಟದ ಆಹಾರ ನೀಡಲು 15 ಕೋಟಿ ಹೆಚ್ಚುವರಿ ಅನುದಾನದ ಅಗತ್ಯವಿದೆ. ಹಾಗಾಗಿ ಹೆಚ್ಚುವರಿ ಅನುದಾನಕ್ಕಾಗಿ ಪಾಲಿಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಐದು ಭರವಸೆಗಳ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್‌ಗೆ ಅನುದಾನ ನೀಡಲು ಮುಂದಾಗಿದ್ದಾರೆ. ಈಗಾಗಲೇ ಪ್ರತಿ ಇಂದಿರಾ ಕ್ಯಾಂಟೀನ್‌ಗೆ ಒಂದು ಲಕ್ಷ ತುರ್ತು ಅನುದಾನ ಬಿಡುಗಡೆ ಮಾಡಿದ್ದಾರೆ. ಜತೆಗೆ ವಿಧಾನಸೌಧ, ವಿಕಾಸಸೌಧ, ಶಾಸಕರ ಮನೆಗೆ ಬಂದು ಕೆಲಸ ಮಾಡುವವರಿಗೆ ಹೊಸ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಬಿಬಿಎಂಪಿ ನಿರ್ಧರಿಸಿದೆ. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇತರೆ ವಿಷಯಗಳು :

ಹೊಲಿಗೆ ಯಂತ್ರ ಉಚಿತ ಯೋಜನೆ 2023 ,ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವ ಮಾಹಿತಿ ಇಲ್ಲಿದೆ.

ವಾಟ್ಸಾಪ್ ಇಂದ ಬಂತು ಬೆಂಕಿ ಫೀಚರ್ಸ್! ವಾಟ್ಸಾಪ್ ಶೀಘ್ರದಲ್ಲೇ ವೀಡಿಯೊ ಕರೆಗಳಿಗಾಗಿ ಸ್ಕ್ರೀನ್ ಶೇರಿಂಗ್ ಫೀಚರ್ಸ್ ಪರಿಚಯಿಸಲಿದೆ.

ಕುಸುಮ್ ಯೋಜನೆ ನೋಂದಣಿ 2023, ಈ ಸೋಲಾರ್ ಪಂಪಿನ ಸಂಪೂರ್ಣ ಮಾಹಿತಿಗಳು ಇಲ್ಲಿದೆ ನೋಡಿ

Comments are closed, but trackbacks and pingbacks are open.