ಅನ್ನಭಾಗ್ಯ ಯೋಜನೆಯಡಿ ಮಹತ್ವದ ಆದೇಶ ಹೊರಡಿಸಿದ ಸರ್ಕಾರ, ಆಗಸ್ಟ್ ನಲ್ಲಿ ಇಂಥವರರಿಗೆ ಅಕ್ಕಿ ಅಣ ಖಾತೆಗೆ ಜಮಾ ಆಗೋದಿಲ್ಲ? ಮತ್ತು ರೇಷನ್ ಕಾರ್ಡ್ ಕ್ಯಾನ್ಸಲ್ ಆಗಲಿದೆ.
ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರು ಇದ್ದರೆ, ಪ್ರತಿ ತಿಂಗಳೂ 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಪಡಿತರ ಚೀಟಿ ಕುಟುಂಬಗಳಿಗೆ ನಗದು ವರ್ಗಾವಣೆ ಸೌಲಭ್ಯ ನೀಡಲಾಗುವುದಿಲ್ಲ.
ಆದರೆ, ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಕುಟುಂಬದಲ್ಲಿ ನಾಲ್ಕು ಸದಸ್ಯರ ಮೇಲ್ಪಟ್ಟವರಿಗೆ ಈ ಸೌಲಭ್ಯ ಅನ್ವಯಿಸುತ್ತದೆ.
ಕಳೆದ ಮೂರು ತಿಂಗಳುಗಳಲ್ಲಿ ಪಡಿತರ ಆಹಾರ ಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯವನ್ನು ಪಡೆಯಲು ಅರ್ಹವಾಗಿದ್ದರೂ, ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳಲ್ಲಿನ ಮುಖ್ಯಸ್ಥರ ಬ್ಯಾಂಕ್ ಖಾತೆಗಳನ್ನು ತೆರೆಯದೇ ಇರುವುದು, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೇ ಇರುವುದು, ಅಥವಾ ಆಧಾರ್ ಸಂಖ್ಯೆ ತಪ್ಪಾಗಿ ಲಿಂಕ್ ಆಗಿರುವುದರಿಂದ ಫಲಾನುಭವಿ ಕುಟುಂಬಗಳ ಪಟ್ಟಿಗಳು ಸಂಬಂಧಿಸಿದೆ.
ಪಡಿತರ ಚೀಟಿದಾರರು ತಮ್ಮ ನ್ಯಾಯಬೆಲೆ ಅಂಗಡಿಯಲ್ಲಿರುವ ಪಟ್ಟಿಯನ್ನು ವೀಕ್ಷಿಸಿ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಸಕ್ರಿಯ ಬ್ಯಾಂಕ್ ಖಾತೆಗೆ ಹೊಂದಿಲ್ಲದಿದ್ದರೆ, ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡದಿದ್ದರೆ, ಬ್ಯಾಂಕ್ ಖಾತೆಯ ಮಾಹಿತಿಯು ಇದುವರೆಗೆ ಲಭ್ಯವಿಲ್ಲದಿದ್ದಲ್ಲಿ, ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನು ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಿ, ನಿಷ್ಕ್ರಿಯ ಬ್ಯಾಂಕ್ ಖಾತೆಯನ್ನು ಪುನರ್ಜೀವನಗೊಳಿಸಿದ ನಂತರ ಅಂತಹ ಪಡಿತರ ಚೀಟಿ ಕುಟುಂಬದ ಮುಖ್ಯಸ್ಥರ ಖಾತೆಗೆ ನಗದು ವರ್ಗಾವಣೆ ಮಾಡಲಾಗುತ್ತದೆ.
ಜುಲೈ ತಿಂಗಳ 20 ರಂದು ತಮ್ಮ ಸಕ್ರಿಯ ಬ್ಯಾಂಕ್ ಖಾತೆಯ ಮಾಹಿತಿಯನ್ನು ನೀಡಲಿಲ್ಲದ ಪಡಿತರ ಕುಟುಂಬಗಳಿಗೆ ಆಗಸ್ಟ್ ತಿಂಗಳಲ್ಲಿ ನಗದು ವರ್ಗಾವಣೆ ಸ್ಥಗಿತಗೊಂಡಿದೆ.
ಇ-ಕೆವೈಸಿ ಯನ್ನು ಮಾಡಿಸದೇ ಇರುವ ಪಡಿತರ ಚೀಟಿದಾರರಿಗೆ ಆಗಸ್ಟ್ ತಿಂಗಳಿಂದ ಆಹಾರ ಧಾನ್ಯ ಹಾಗೂ ನಗದು ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು. ಬಯೋಮೆಟ್ರಿಕ್ ಪರಿಶೀಲನೆಯ ಬದಲಾಗಿ ಮೊಬೈಲ್ ಓಟಿಪಿ ಮುಖಾಂತರ ಆಹಾರ ಧಾನ್ಯವನ್ನು ಪಡೆಯುವ ವ್ಯವಸ್ಥೆಯನ್ನು ಮುಂದಿನ 2 ತಿಂಗಳಿಗೆ ಸ್ಥಗಿತಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಲಾಗಿದೆ.
Comments are closed, but trackbacks and pingbacks are open.