ಪಡಿತರ ಚೀಟಿ ತಿದ್ದುಪಡಿ ಮಾಡುವವಾರ ಗಮನಕ್ಕೆ, ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡುವ ಸುಲಭ ವಿಧಾನ ಇಲ್ಲಿದೆ, ಅಪ್ಲೈ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.
ನಿಮ್ಮ ಕಾರ್ಡ್ ಚಾಲ್ತಿ ಇರುವ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳ ತಿದ್ದುಪಡಿ, ಮನೆ ಯಜಮಾನಿ ಬದಲಾವಣೆ, ಹೊಸ ಹೆಸರು ಸೇರ್ಪಡೆ ಅಥವಾ ಕೈಬಿಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ ನಿಮ್ಮ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಬಾವುದು ಎಂದು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ನಿಮ್ಮ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಪ್ರಮುಖ ದಾಖಲೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಮತ್ತು 6 ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಯನ್ನು ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಸಲ್ಲಿಸಬಹುದು. ಮತ್ತು ನಿಮ್ಮ ಮೊಬೈಲ್ ನಲ್ಲೆ ಮೂಲಕ ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿದು ಬಂದಿದೆ. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ನಿಮ್ಮ ಮೊಬೈಲ್ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಹೊಸದಾಗಿ ರೇಷನ್ ಕಾರ್ಡ್ ಹೊಂದಿದವರು ಹೊಸದಾಗಿ ತಮ್ಮ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ಈ ಪ್ರಮುಖ ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.
ಇದು ಓದಿ: ಮಹಿಳೆಯರಿಗೆ ಆಫರೋ ಆಫರ್.! ಎಲ್ರಿಗೂ ಕೊಡ್ತಿದಾರೆ ಫ್ರೀ ಗ್ಯಾಸ್ ಸಿಲಿಂಡರ್; ನಿಮಗೂ ಬೇಕು ಅಂದ್ರೆ ಈ ರೀತಿ ಮಾಡಿ
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ನೋಡಿ ಹಂತ ಹಂತವಾದ ಸಂಪೂರ್ಣಮಾಹಿತಿ.
ನಿಮ್ಮ ಪಡಿತರ ಚೀಟಿಯ ಮೂಲ ಪ್ರಮುಖ ದಾಖಲೆ ಎಂದರೆ ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಮತ್ತು ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ನೀಡಬೇಕಾಗುತ್ತದೆ.
*ಮೊದಲು ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/home ಭೇಟಿ ನೀಡಿ
*ಮುಖ್ಯ ಪುಟದಲ್ಲಿ ಕಾಣುವ ಇ-ಸೇವೆಗಳನ್ನು ಆಯ್ಕೆ ಮಾಡಿ.
*ನಂತರ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
*ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಬೇಕು.
*ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಒಮ್ಮೆ ಚೆಕ್ ಮಾಡಿ ಸಬ್‌ಮೀಟ್ ಮಾಡಿ.
*ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕೆಲವು ದಿನಗಳ ನಂತರ ಕಳಿಸಲಾಗುತ್ತದೆ.
ಇತರೆ ವಿಷಯಗಳು:
ಶ್ರಮಿಕ್ ನಿವಾಸ್ ವಸತಿ ಯೋಜನೆ, ಕಾರ್ಮಿಕ ಕಾರ್ಡ್ ಇದ್ದವರಿಗೆ ಉಚಿತ ಮನೆ ಯೋಜನೆ, ಇಂದೇ ಈ ಕಚೇರಿಗೆ ಭೇಟಿ ನೀಡಿ.
Comments are closed, but trackbacks and pingbacks are open.