ಶಿವಮೊಗ್ಗ ಜಿಲ್ಲೆಯ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಶಿವಮೊಗ್ಗ ಜಿಲ್ಲೆಯ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ, shivamogga kannada rajyotsava achievers information in kannada shivamogga kannada rajyotsava achievers in kannada
Shivamogga Kannada Rajyotsava Achievers Information in Kannada
ಮಲೆನಾಡ ಜನರಿಗೆ ಈ ಬಾರಿಯ ರಾಜ್ಯೋತ್ಸವ ನಿಜಕ್ಕೂ ಸಂಭ್ರಮ ತಂದಿದೆ. ಏಕೆಂದರೆ ಶಿವಮೊಗ್ಗದ ನಾಲ್ವರು ಸಾಧಕರನ್ನು ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ. ಆಯ್ಕೆಯಾದವರ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಶಿವಮೊಗ್ಗ ಜಿಲ್ಲೆಯ ನಾಲ್ವರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಅವರಿಗೆ ನವೆಂಬರ್ 1 ಈ ದಿನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಯೋಗ, ಶಿಕ್ಷಣ, ಜಾನಪದ ಮತ್ತು ಯಕ್ಷಗಾನ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಭ. ಮ. ಶ್ರೀಕಂಠ :
ಯೋಗ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶ್ರೀಕಂಠ ಅವರು ಶಿವಮೊಗ್ಗದ ಬಿ. ಬಿ. ಸ್ಟ್ರೀಟ್ ನಿವಾಸಿಯಾಗಿದ್ದು, 1981 ರಿಂದ ಯೋಗ ಕ್ಷೇತ್ರದಲ್ಲಿ ನಿರಂತರ ಕಾರ್ಯ ನಿರ್ವಹಿಸುತ್ತಿದ್ದಾರೆ.
ಬೆಂಗಳೂರಿನ ಬಿ. ಕೆ. ಎಸ್. ಐಯ್ಯಂಗಾರ್ ಅವರ ಬಳಿ ಯೋಗ ತರಬೇತಿ ಪಡೆದರು. ಬಳಿಕ ಉದಯ ಮೋಟಾರ್ಸ್‌ನಲ್ಲಿಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸಿದರು. ಉದ್ಯೋಗ ಮಾಡುತ್ತಿದ್ದ ಅವಧಿಯಲ್ಲಿಯೂ ಯೋಗ ತರಬೇತಿ ನೀಡುತ್ತಿದ್ದರು. ಅಜೀತ ಯೋಗ ಕೇಂದ್ರ ಬೆಂಗಳೂರು ಇವರು ಯೋಗಶ್ರೀ ಪ್ರಶಸ್ತಿಯನ್ನು ನೀಡಿ ಶ್ರೀಕಂಠ ಅವರನ್ನು ಸನ್ಮಾನಿಸಿದ್ದಾರೆ.
ಪ್ರೊ. ಪಿ. ವಿ. ಕೃಷ್ಣ ಭಟ್ಟ
ಪ್ರೊ. ಪಿ. ವಿ. ಕೃಷ್ಣ ಭಟ್ಟ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಪಟ್ಲಮನೆ ಗ್ರಾಮದಲ್ಲಿ ಜನಿಸಿದ ಕೃಷ್ಣ ಭಟ್ಟ ಅವರು, ಹೇರಂಬಾಪುರ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಶಿವಮೊಗ್ಗದಲ್ಲಿ ಪ್ರೌಢ ಹಾಗೂ ಕಾಲೇಜು ಶಿಕ್ಷಣ, ಬೆಂಗಳೂರು ವಿವಿಯಲ್ಲಿ ಎಂಎ ಪದವಿ ಪಡೆದಿದ್ದಾರೆ.
ಡಿವಿಎಸ್ ಕಾಲೇಜಿನಲ್ಲಿ ಸಮಾಜ ಶಾಸ್ತ್ರ ವಿಷಯದಲ್ಲಿ ಉಪನ್ಯಾಸಕರಾಗಿ ಸತತ 30 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾರ್ಥಿ ಪರಿಷತ್‌ನಲ್ಲಿ ಕಳೆದ 40 ವರ್ಷಗಳಿಂದ ಕೆಲಸ ಮಾಡಿದ್ದಾರೆ. ವಿದ್ಯಾರ್ಥಿ ಪರಿಷತ್ತಿನ ಅಖಿಲ ಭಾರತ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಐಸಿಎಸ್‌ಎಸ್‌ಆರ್ ಕೇಂದ್ರ ಸಮಿತಿ ಸದಸ್ಯ ಹಾಗೂ ಒಡಿಶಾದ ಕೇಂದ್ರೀಯ ವಿವಿಯ ಚಾನ್ಸಲರ್ (ಕುಲಾಧಿಪತಿ) ಆಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ.
ಗೋಪಾಲಾಚಾರ್ಯ
ಗೋಪಾಲಾಚಾರ್ಯ ಅವರನ್ನು ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿಯಲ್ಲಿ ಜನಿಸಿದ್ದಾರೆ.
ಯಕ್ಷಗಾನದ ಬಗ್ಗೆ ಗೋಪಾಲಾಚಾರ್ಯರಿಗೆ ಇದ್ದ ಅತೀವ ಆಸ್ಥೆಯಿಂದಾಗಿ ತಮ್ಮ 14 ವರ್ಷದಿಂದಲೇ ಇದರಲ್ಲಿ ತೊಡಗಿಸಿಕೊಂಡರು. ಇವರು ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಯಕ್ಷಗಾನ ಪ್ರದರ್ಶಿಸಿದ್ದಾರೆ. ಮಾತ್ರವಲ್ಲದೇ ದೇಶ, ವಿದೇಶಗಳಲ್ಲೂ ಯಕ್ಷಗಾನದ ಕಂಪನ್ನು ಬೀರಿದ್ದಾರೆ.
ಗೌರಮ್ಮ ಹುಚ್ಚಪ್ಪ ಮಾಸ್ತರ
ಗೌರಮ್ಮ ಹುಚ್ಚಪ್ಪ ಮಾಸ್ತರ ಅವರನ್ನು ಜಾನಪದ ಕಲಾ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗೌರಮ್ಮ ಹುಚ್ಚಪ್ಪ ಮಾಸ್ತರ ಅವರು, ಜಾನಪದ ಹಾಗೂ ಕರಕುಶಲ ಕಲೆಗಾರ್ತಿ. ಹಲವಾರು ವಸ್ತು ಪ್ರದರ್ಶನಗಳಲ್ಲಿ ಅವರು ಭಾಗವಹಿಸಿದ್ದಾರೆ. ಹಸೆ ಹಾಗೂ ಬುಟ್ಟಿ ಚಿತ್ತಾರಕ್ಕೆ ಗೌರಮ್ಮ ಅವರು ಹೆಸರುವಾಸಿ. ಅನಕ್ಷರಸ್ಥೆ ಆದ ಇವರು, ನಾಡಿನ ಜಾನಪದ ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸಿದ್ದಾರೆ.
ಇತರೆ ವಿಷಯಗಳು :
ರಾಜಸ್ಥಾನದ ನಾಥದ್ವಾರದ ಶಿವನ ಪ್ರತಿಮೆ ಲೋಕಾರ್ಪಣೆ
ವಿಶ್ವದ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಕೆಎಲ್‌ಇ ಸಂಶೋಧಕರು
Comments are closed, but trackbacks and pingbacks are open.