ಸ್ವಯಂ ಉದ್ಯೋಗ ಸಾಲ 2024, ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ಸಹಾಯಧನ, ಇಂದೇ ಆಸಕ್ತರು ಅರ್ಜಿ ಸಲ್ಲಿಸಿ.
ಸ್ವಯಂ ಉದ್ಯೋಗ ಸಾಲ 2024, ಸ್ವಂತ ಉದ್ಯೋಗ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ಸಹಾಯಧನ, ಇಂದೇ ಆಸಕ್ತರು ಅರ್ಜಿ ಸಲ್ಲಿಸಿ.
ಸ್ವಯಂ ಉದ್ಯೋಗ ಮಾಡುವ ಯುವಜನತೆಗೆ ಪ್ರೇರೇಪಿಸುವ ಸಲುವಾಗಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಸೇರಿದಂತೆ ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿದ್ದಾರೆ.
ಆರ್ಥಿಕವಾಗಿ ಮತ್ತು ಸಾಮಾಜಿಕ ವಾಗಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ಸಹಾಯಧನವನ್ನು ಕೂಡ ನೀಡಲಾಗುತ್ತಿದೆ. ಇಂತಹ ಒಂದು ವಿಶೇಷ ಯೋಜನೆ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ತಿಂಗಳ ಕೊನೆಯ ದಿನ ಅಂತಿಮ ಗಡುವಾಗಿದೆ. ಮಾಹಿತಿ ತಿಳಿದುಕೊಂಡು ನೀವು ಆಸಕ್ತಿ ಇದ್ದರೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಕುಟುಂಬದವರು ಮತ್ತು ಸ್ನೇಹಿತರಿಗೆ ಈ ಯೋಜನೆ ಬಗ್ಗೆ ತಿಳಿಸಿ ನೆರವಾಗಿ.
ಯೋಜನೆಯ ಉದ್ದೇಶ:-
- ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳಿಗೆ (Minority
Communities of state) ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಕಡಿಮೆ ಬಡ್ಡಿ ದರದಲ್ಲಿ ಈ ಸಾಲ ಸೌಲಭ್ಯ(Loan facility) ಒದಗಿಸುವ ಯೋಜನೆಯನ್ನು ಘೋಷಿಸಿದೆ. - ಈ ಯೋಜನೆಯಡಿ, ಅಲ್ಪಸಂಖ್ಯಾತರಿಗೆ ವ್ಯಾಪಾರ ಗುಡಿ ಕೈಗಾರಿಕೆ, ಹೈನುಗಾರಿಕೆ, ಪಶು ಸಂಗೋಪನೆ, ಕುರಿ ಕೋಳಿ ಸಾಕಾಣಿಕೆ ಅಥವಾ ಇನ್ನಿತರ ಯಾವುದೇ ವಿವಿಧ ಉದ್ಯಮಗಳನ್ನು ಪ್ರಾರಂಭಿಸಲು ಅಗತ್ಯವಿರುವ ಹಣಕಾಸಿನ ನೆರವನ್ನು ನೀಡಲು ನಿರ್ಧರಿಸಿದೆ.
- ಈ ಯೋಜನೆಯ ಮೂಲಕ ನೆರವನ್ನು ಒದಗಿಸಿ ಅಲ್ಪಸಂಖ್ಯಾತ ಸಮುದಾಯಗಳ ಜನರು ತಮ್ಮ ಜೀವನಮಟ್ಟವನ್ನು ಸುಧಾರಿಸಿಕೊಳ್ಳಲು ನೆರವು ಮತ್ತು ಸಮಾಜದ ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಉದ್ದೇಶವಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:-
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು
- ಸರ್ಕಾರದಿಂದ ಗುರುತಿಸಲ್ಪಟ್ಟ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರೈಸ್ತ, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಯುವಜನತೆ ಅರ್ಜಿ ಸಲ್ಲಿಸಬಹುದು
- ಅರ್ಜಿದಾರರು ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 55 ವರ್ಷ ಮೀರಿರಬಾರದು.
- ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರಿಗೆ ರೂ. 81000 ಹಾಗೂ ನಗರ ಪ್ರದೇಶದಲ್ಲಿ ರೂ.1,30,000 ಮೀರಿರಬಾರದು.
- ಅರ್ಜಿದಾರನ ಕುಟುಂಬದಲ್ಲಿ ಯಾವುದೇ ಸದಸ್ಯರು ಕೇಂದ್ರ ಅಥವಾ ರಾಜ್ಯ ಸರ್ಕಾರಿ ಉದ್ಯೋಗಿಯಾಗಿರಬಾರದು ಮತ್ತು ಯಾರು ಆದಾಯ ತೆರಿಗೆ ಪಾವತಿದಾರರಾಗಿರಬಾರದು.
- ಸದ್ಯಕ್ಕಿಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ ಶೀಘ್ರದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಕಾರ್ಯರೂಪಕ್ಕೆ ಬರಲಿದೆ.
ಅರ್ಜಿ ಸಲ್ಲಿಸುವ ವಿಧಾನ:-
- ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
*https://kmdconline.karnataka.gov.in/Portal/home ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. - ಗ್ರಾಮ ಒನ್ / ಕರ್ನಾಟಕ ಒನ್ / ಬೆಂಗಳೂರು ಒನ್ ಅಥವಾ ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು
- ಅರ್ಜಿ ಸಲ್ಲಿಸಲು ಫೆಬ್ರವರಿ 29, 2024 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
- ಚಿಕ್ಕಮಗಳೂರು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯ ಅಭಿವೃದ್ಧಿ ನಿಗಮ ವ್ಯವಸ್ಥಾಪಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
- ಸಹಾಯವಾಣಿ ಸಂಖ್ಯೆ: 08262-295843
ಇತರೆ ವಿಷಯಗಳು:
ಹೊಲಿಗೆ ಯಂತ್ರ ಯೋಜನೆ 2024, 50000 ಸಹಾಯಧನ ಪಡೆಯಲು ಇಂದೇ ಅರ್ಜಿ ಸಲ್ಲಿಸಿ.
ಹೂಡಿಕೆದಾರರಿಗೆ ಗುಡ್ ನ್ಯೂಸ್, 1 ಲಕ್ಷ ರೂಪಾಯಿ ಹೂಡಿಕೆ ಮಾಡಿ 44,995 ರೂ. ಬಡ್ಡಿ ಗಳಿಸಿಕೊಳ್ಳಲು ಅದ್ಭುತ ಅವಕಾಶ.
ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್, ಗೃಹಜ್ಯೋತಿ ನಿಯಮದಲ್ಲಿ ಹೊಸ ಮಹತ್ವದ ಬದಲಾವಣೆ.
Comments are closed, but trackbacks and pingbacks are open.