ಉದ್ಯೋಗಿನಿ ಯೋಜನೆ 2023, ಉದ್ಯಮ ಆರಂಭಿಸಲು ಮಹಿಳೆಯರಿಗೆ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ, ಇಲ್ಲಿದೆ ನೋಡಿ ಅರ್ಜಿ ಹೇಗೆ ಸಲ್ಲಿಸಿವುದು ಎಂಬ ಮಾಹಿತಿ.

ಉದ್ಯೋಗಿನಿ ಯೋಜನೆ 2023, ಉದ್ಯಮ ಆರಂಭಿಸಲು ಮಹಿಳೆಯರಿಗೆ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ, ಇಲ್ಲಿದೆ ನೋಡಿ ಅರ್ಜಿ ಹೇಗೆ ಸಲ್ಲಿಸಿವುದು ಎಂಬ ಮಾಹಿತಿ.

ಈ ಯೋಜನೆಯಿಂದ ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು,ಮತ್ತು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ ಇದಾಗಿದೆ. ಈ ಯೋಜನೆಯ ಲಕ್ಷಣಗಳೇನು?, ಯೋಜನೆಯಡಿ ಸಾಲ ಪಡೆಯಲು ಅರ್ಹತೆ ಏನು?, ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ ನೋಡಿ.

ಮಹಿಳೆಯರು ಉದ್ಯಮ (Business) ಆರಂಭಿಸಿ ಯಶಸ್ಸು ಕಾಣಬೇಕೆಂದು ಹಂಬಲಿಸುವ ಬಡ ಮಹಿಳೆಯರಿಗಾಗಿ (Women) ಸರ್ಕಾರ ಆರಂಭಿಸಿರುವ ಯೋಜನೆಯೇ ‘ಉದ್ಯೋಗಿನಿ ಸ್ಕೀಮ್’ (Udyogini Scheme). ಈ ಯೋಜನೆಯಡಿ ಮಹಿಳೆಯರು 3 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ಪಡೆಯಬಹುದು. ಈ ಯೋಜನೆಯಡಿಯಲ್ಲಿ ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಬಡ್ಡಿರಹಿತ ಸಾಲ ಈ ಯೋಜನೆಯಡಿ ದೊರೆಯುತ್ತದೆ. ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಮತ್ತು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ (Women Development Corporation) ಜಾರಿಗೆ ತಂದಿರುವ ಯೋಜನೆ.

ಉದ್ಯೋಗಿನಿ ಯೋಜನೆ ಎಂದರೇನು?

ಒಟ್ಟಾರೆ ಈ ದೇಶದ ಆರ್ಥಿಕ ಬೆಳವಣಿಗೆಗಾಗಿ ಸಣ್ಣ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುವುದಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ. ಮುಖ್ಯವಾಗಿ ಮಹಿಳೆಯರ ಸಬಲೀಕರಣವನ್ನು ಗಮನದಲ್ಲಿಟ್ಟುಕೊಂಡು ಜಾರಿಗೊಳಿಸಲಾಗಿದೆ ಈ ಯೋಜನೆ. ಈ ಸಣ್ಣ ಉದ್ಯಮ ಆರಂಭಿಸಲು ಬಂಡವಾಳಕ್ಕಾಗಿ ಈ ಯೋಜನೆಯಡಿ ಮಹಿಳೆಯರಿಗೆ 3 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ ಈ ಯೋಜನೆಯಡಿ ನೀಡಲಾಗುತ್ತದೆ.

ಯಾವೆಲ್ಲ ಉದ್ಯಮ ಆರಂಭಿಸಲು ಸಿಗುತ್ತೆ ಸಾಲ?

ಈ ಯೋಜನೆಯಡಿಯಲ್ಲಿ ಸುಮಾರು 88 ವಿಧದ ಸಣ್ಣ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ಪಡೆಯಬಹುದಾಗಿದೆ. ಇವುಗಳಲ್ಲಿ ಹೊಲಿಗೆ, ಮತ್ಸ್ಯೋದ್ಯಮ, ದಿನಸಿ ಮಾರಾಟ, ಗ್ರಂಥಾಲಯ, ಬೇಕರಿ, ಅಗರಬತ್ತಿ ತಯಾರಿಕೆ, ಡೈರಿ ಹಾಗೂ ಕುಕ್ಕುಟೋದ್ಯಮ ಕೂಡ ಸೇರಿವೆ.

ಸಾಲಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆ ಬೇಕು?

ಆಧಾರ್ ಕಾರ್ಡ್.
ಜನನ ಪ್ರಮಾಣಪತ್ರ.
ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್​ಹೆಡ್ ಇರುವ ಪತ್ರ.
ಬಿಪಿಎಲ್​ ಕಾರ್ಡ್​ನ ಪ್ರತಿ.
ಜಾತಿ ಪ್ರಮಾಣಪತ್ರ.
ಆದಾಯ ಪ್ರಮಾಣಪತ್ರ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಸಂಬಂಧಪಟ್ಟ ಆ ಬ್ಯಾಂಕ್​ನ ವೆಬ್​ಸೈಟ್​ನಿಂದ ಉದ್ಯೋಗಿನಿ ಸಾಲದ ಅರ್ಜಿಯ ಪ್ರತಿಯನ್ನು ಡೌನ್​ಲೋಡ್ ಮಾಡಿ.

ಅರ್ಜಿಯಲ್ಲಿ ಎಲ್ಲ ವಿವರಗಳನ್ನು ಭರ್ತಿ ಮಾಡಿ.
ಬ್ಯಾಂಕ್ ಕೇಳಿರುವ ಎಲ್ಲ ದಾಖಲೆಗಳ ಪ್ರತಿಯನ್ನು ಅರ್ಜಿಯ ಜತೆಗೆ ಲಗತ್ತಿಸಿರಬೇಕು.

ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಬ್ಯಾಂಕ್ ಶಾಖೆಗೆ ತೆರಳಿ ಸಾಲ ಮಂಜೂರಾಗಿರುವ ಬಗ್ಗೆ ವಿಚಾರಿಸಿ.

ಬ್ಯಾಂಕ್​ ಶಾಖೆಗೆ ಭೇಟಿ ನೀಡಿಯೂ ಅರ್ಜಿ ಸಲ್ಲಿಸಬಹುದಾಗಿದೆ.

ಇತರೆ ವಿಷಯಗಳು :

ಕರ್ನಾಟಕ ಬಜೆಟ್ 2023, ಸಿದ್ದು ಲೆಕ್ಕದಲ್ಲಿ ರಾಜ್ಯದ ಜನತೆಗೆ ಕಾದಿದೆಯಾ ಶಾಕ್?, ಲೈವ್ ವೀಕ್ಷಿಸುವುದು ಹೇಗೆ? ನೀವು ಗಮನಿಸಬೇಕಾದ ಪ್ರಮುಖ ಅಂಶಗಳು ಇಲ್ಲಿದೆ.

ಗೃಹಲಕ್ಷ್ಮಿ ಗೃಹಜ್ಯೋತಿ ಅರ್ಜಿದಾರರೇ ದಯಮಾಡಿ ಗಮನಿಸಿ, ನೀವು ಈ ವಿಚಾರದಲ್ಲಿ ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ.

ಅನ್ನ ಭಾಗ್ಯ ‘ಅಕ್ಕಿ ಜೊತೆ ರೊಕ್ಕ’ ಯೋಜನೆಗೆ ಬಿತ್ತು ಬ್ರೇಕ್, ಬೆಂಗಳೂರಲ್ಲಿ ನ್ಯಾಯಬೆಲೆ ಅಂಗಡಿಗಳು ಕ್ಲೋಸ್, ಇಲ್ಲಿದೆ ನೋಡಿ ಅಸಲಿ ಕಾರಣ.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಸರ್ಕಾರ ಇಂದು ಮಹತ್ವದ ಆದೇಶ ಹೊರಡಿಸಿದೆ, ಈ ದಿನಾಂಕದಿಂದ ಅರ್ಜಿ ಸಲ್ಲಿಕೆ ಪ್ರಾರಂಭ.

Comments are closed, but trackbacks and pingbacks are open.